ಶಿವಮೊಗ್ಗ, ಜೂನ್ 19, : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಜೂನ್ -21 ರಂದು ಬೆಳಿಗ್ಗೆ 08.45 ಕ್ಕೆ ಇಲಾಖಾ ಕಛೇರಿಯ ಮೇಲ್ಛಾವಣಿಯಲ್ಲಿರುವ ಸಭಾಂಗಣದಲ್ಲಿ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರ ಸಹಭಾಗಿತ್ವದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಉದ್ದೇಶಿಲಾಗಿದ್ದು, ಜಿಲ್ಲೆಯ ಎಲ್ಲಾ ಮಾಜಿ ಸೈನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂ. ಸಂ.: 08182-220925 ನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ|| ಸಿ.ಎ. ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!