ಶಿವಮೊಗ್ಗ ಜೂನ್ 17 : 2022-23 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್‍ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮೆಟ್ರಿಕ್‍ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಶಿಕಾರಿಪುರ ಟೌನ್ ಹಾಗೂ ಮೆಟ್ರಿಕ್‍ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಶಿರಾಳಕೊಪ್ಪ ಟೌನ್ ಈ ವಿದ್ಯಾರ್ಥಿನಿಲಯಗಳಿಗೆ 5 ರಿಂದ ಎಸ್‍ಎಸ್‍ಎಲ್‍ಸಿವರೆಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 30 ಕಡೆಯ ದಿನ.
ಅಭ್ಯರ್ಥಿಯ ಆದಾಯ ಮಿತಿ ರೂ.1,00,000 ಒಳಗೆ ಇರಬೇಕು, ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಶೇ.75 ರಷ್ಟು ಅಲ್ಪಸಂಖ್ಯಾತ ಹಾಗೂ ಶೇ.25 ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು.

error: Content is protected !!