ಶಿವಮೊಗ್ಗ ಜೂನ್ 09 : ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6000/- ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ನೆರವು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಬೇಕಾದರೆ
e-KYC ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಜುಲೈ 31 e-KYC ಮಾಡಿಸಲು ಕೊನೆಯ ದಿನಾಂಕವಾಗಿರುವುದರಿಂದ ರೈತರು ಓಟಿಪಿ ಆಧಾರಿತ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಆಧಾರಿತ e-ಏಙಅ ಮಾಡಿಸಬೇಕೆಂದು ಶಿವಮೊಗ್ಗ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.