News Next


ಶಿವಮೊಗ್ಗ, ಆಗಸ್ಟ್ 07: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು 23/08/2021 ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಇಲ್ಲಿಗೆ ಸಲ್ಲಿಸುವುದು.
.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9743429595, 9449371579, Email – cbrsetiholalur@gmail.com ಗಳನ್ನು ಸಂಪರ್ಕಿಸುವುದು.

ಎನ್.ಸಿ.ವಿ.ಟಿ ಮತ್ತು ಎಸ್.ಸಿ.ವಿ.ಟಿ.ಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಶಿವಮೊಗ್ಗ, ಆಗಸ್ಟ್ 07 : ಕೈಗಾಗಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಆಯಾ ತಾಲೂಕಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಖಾಲಿಯಿರುವ ಎನ್.ಸಿ.ವಿ.ಟಿ. ಮತ್ತು ಎಸ್.ಸಿ.ವಿ.ಟಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಿದ್ದು, ದಿ: 28/08/2021 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆಸಕ್ತರು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ವೆಬ್‍ಸೈಟ್ www.emptrg.kar.nic.in ಅಥವಾ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸುವುದು.

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ
ಶಿವಮೊಗ್ಗ, ಆಗಸ್ಟ್ 07 : ಜಿಲ್ಲಾ ಚುನಾವಣಾ ಶಾಖೆಯು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2022 ನ್ನು ದಿ: 09/08/2021 ರಿಂದ ಆರಂಭಿಸುತ್ತಿದ್ದು, ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳ್ಳಲು, ವಲಸೆ, ವರ್ಗಾವಣೆಯಾಗಿ ಬೇರೆಡೆ ಹೋಗಿರುವವರು, ಮತ್ತೊಂದು ವಿಧಾನಸಭಾ ಕ್ಷೇತ್ರದಿಂದ ಇಲ್ಲಿಗೆ ಬಂದಿರುವವರು ಹಾಗೂ ಮತದಾರರ ಗುರುತಿನ ಚೀಟಿಯಲ್ಲಿನ ದೋಷಗಳನ್ನು ಸರಿಪಡಿಸಲು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಮೂಲಕ (ಬಿಎಲ್‍ಓ) ನಮೂನೆ-6, 7, 8 ಮತ್ತು 8ಎ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ದಿ:09/08/2021 ರಿಂದ ದಿ: 31/10/2021ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮನೆ ಮನೆ ಭೇಟಿಯ ಕಾರ್ಯವನ್ನು ನಿರ್ವಹಿಸುತ್ತಿದ್ದು, ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ಅಗತ್ಯ ದಾಖಲೆ/ಮಾಹಿತಿಗಳನ್ನು ನೀಡಿ ಸಹಕರಿಸುವಂತೆ ಹಾಗೂ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದ ಸದುಪಯೋಗ ಪಡೆದುಕೊಳ್ಳುವಂತೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!