ಶಿವಮೊಗ್ಗ, ಮೇ -09 : : ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಮೆ -15 ರಿಂದ 30 ರವರೆಗೆ ಶಿವಮೊಗ್ಗ ಜಿಲ್ಲಾಯಾದ್ಯಂತ ಜಾನುವಾರುಗಳಲ್ಲಿ ಕಂಡುಬರುವ ಕಂದುರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕಂದುರೋಗವು ಪ್ರಾಣಿಜನ್ಯ ರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಈ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ.
ಲಸಿಕಾದಾರರು ತಮ್ಮ ಮನೆ ಬಾಗಿಲಲ್ಲೇ ತಮ್ಮ ಕರುಗಳಿಗೆ ಕಿವಿಯೋಲೆ ಅಳವಡಿಸಿ ನೊಂದಣಿ ಮಾಡಿಕೊಂಡು 4 ರಿಂದ 8 ತಿಂಗಳ ಆಕಳು/ಎಮ್ಮೆಗಳ ಹೆಣ್ಣು ಕರುಗಳಿಗೆ ಲಸಿಕೆಯನ್ನು ಹಾಕಲಾಗುವುದು.
ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು /ಗ್ರಾಮವಾರು ತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಬೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಎಲ್ಲಾ ರೈತರು ಮತ್ತು ಪಶು ಪಾಲಕರು ತಮ್ಮಲ್ಲಿರುವ ಅರ್ಹ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಂದುರೋಗವನ್ನು ನಿಯಂತ್ರಿಸುವಲ್ಲಿ ಸಹಕರಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಿವಯೋಗಿ ಬಿ.ಯಲಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.