ಶಿವಮೊಗ್ಗ: ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರಂಟಿಗಳನ್ನೂ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರಕ್ಕೆ ಜಿಲ್ಲಾ ಎನ್.ಎಸ್.ಯು.ಐ. ಹಾಗೂ ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಶಿವಮೊಗ್ಗದ ಅಶೋಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಅಂಚಿ  ಸಂಭ್ರಮಿತಿ  ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ  ಅಭಿನಂದನೆ ಸಲ್ಲಿಸಲಾಯಿತು .
 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ HS ಸುಂದರೇಶ್ ರವರು ಮಾತನಾಡಿ ಕಾಂಗ್ರೆಸ್ ಜನಪರ, ಪ್ರಗತಿಪರ ಹಾಗೂ ನುಡಿದಂತೆ ನಡೆಯುವ ಸರ್ಕಾರ ಎನ್ನುವುದು ಮತ್ತೊಮ್ಮೆ ಸಾಬೀತು ಮಾಡಿದೆ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ೫ ವರ್ಷಗಳ ಸುಭದ್ರ ಸರ್ಕಾರ ನಡೆಸಿದ್ದರು, ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಂಡಿದ್ದರು. ಅಂದಿನ ಚುನಾವಣೆಯಲ್ಲಿ ನೀಡಿದ್ದ ೧೬೫ ಭರವಸೆಗಳ ಪೈಕಿ ೧೫೩ ಭರವಸೆಗಳನ್ನು ಈಡೇರಿಸಿ, ಕಾಂಗ್ರೆಸ್ ನುಡಿದಂತೆ ನಡೆಯುತ್ತದೆ ಎಂದು ತೋರಿಸಿದ್ದರು. ಇದೇ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ  ಕುಮಾರ್ ರವರು ಮಾತನಾಡಿ
ಈ ಬಾರಿ ಚುನಾವಣೆಯಲ್ಲಿ ರಾಜ್ಯದ ಜನತೆಗೆ ೫ ಗ್ಯಾರಂಟಿಗಳನ್ನು ನೀಡಿತ್ತು. ಗೃಹಜ್ಯೋತಿ, ಗೃಹಲಕ್ಷಿ, ಅನ್ನಭಾಗ್ಯ, ನಿರುದ್ಯೋಗ ಭತ್ಯೆ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿಗಳನ್ನು ಕೊಟ್ಟಿದ್ದರು. ಜೊತೆಗೆ ಈ ಗ್ಯಾರಂಟಿಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲೇ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದರು. ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ ಹಾಗೂ ಎಸ್ ಪಿ ದಿನೇಶ್ ಮಾತನಾಡಿ ಅದೇ ರೀತಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ, ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ ನಡೆದ ಮೊದಲ ಸಚಿವ ಸಂಪುಟ ಸಭೆಯಂದೇ ಎಲ್ಲಾ ೫ ಗ್ಯಾರಂಟಿಗಳನ್ನೂ ಈಡೇರಿಸಲು ತೀರ್ಮಾನಿಸಿದ್ದರು.
ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ೫ ಗ್ಯಾರಂಟಿಗಳನ್ನು ಈಡೇರಿಸಲು ತೀರ್ಮಾನ ತೆಗೆದುಕೊಂಡಿದ್ದು, ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರ ಎನ್ನುವುದು ಸಾಬೀತಾಗಿದೆ.
ಚುನಾವಣೆ ಪೂರ್ವದಲ್ಲಿ ಜನರಿಗೆ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸುವ ಇಚ್ಛಾಶಕ್ತಿ ತೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಎಲ್ಲಾ ಸಚಿವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ಅದೇ ರೀತಿ ಕಾಂಗ್ರೆಸ್‌ಗೆ ಮತ ನೀಡಿ ಸುಭದ್ರ ಸರ್ಕಾರ ರಚನೆಗೆ ಕಾರಣರಾದ ಜನರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷ, ಜಿಲ್ಲಾ NSUI  ನ ಅಧ್ಯಕ್ಷರಾದ ವಿಜಯ್, ಆರಿಫ್, ರವಿ ಕಾಟಿಕೆರೆ, ಹರ್ಷಿತ್, ಗಿರೀಶ್, ಮಲಗೊಪ್ಪ ಶಿವು,ಅಕ್ಬರ್, ಚಂದ್ರೋಜಿ ರಾವ್, ರವಿ,ಚರಣ್, ಸಾಗರ್, ಆಕಾಶ್, ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ಅಬ್ದುಲ್ ಸತ್ತರ್, ಅನ್ನು, ಹುಸೇನ್, ಬಸವರಾಜ್, ಅಭಿ  ಹಾಗೂ ನೂರಾರು ಯುವಕರು ಕಾರ್ಯಕರ್ತರು ಪಾಲ್ಗೊಂಡಿದ್ದರು ಸಂಭ್ರಮಿಸಿದರು

error: Content is protected !!