ಶಿವಮೊಗ್ಗ, ಏಪ್ರಿಲ್ 23 : ಶಿವಮೊಗ್ಗ ಸೇರಿದಂತೆ ನೆರೆಯ ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಲಕ್ಷಾಂತರ ಕಾರ್ಮಿಕರಿಗೆ ಹಾಗೂ ಅವರ ಕುಟುಂಬಗಳ ಅವಲಂಬಿತ ಸದಸ್ಯರಿಗೆ ಇ.ಎಸ್.ಐ. ಆಸ್ಪತ್ರೆಯ ಪ್ರಯೋಜನ ದೊರೆಯಲಿದೆ ಎಂದು ಸಾಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.
ಅವರು ಇಂದು ನಗರದ ರಾಗಿಗುಡ್ಡದಲ್ಲಿ ಬಹು ನಿರೀಕ್ಷಿತ 100ಹಾಸಿಗೆ ಸಾಮಥ್ರ್ಯದ ಇಎಸ್‍ಐಸಿ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಕೊರೋನ ಸೇರಿದಂತೆ ಅನೇಕ ಕಾರಣಗಳಿಂದ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದ್ದು, ಮುಂದಿನ 2ವರ್ಷಗಳ ಅವಧಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ. ನಗರಕ್ಕೆ ಹತ್ತಿರವಾದ ವಿಶಾಲ ಪ್ರದೇಶದಲ್ಲಿ ಕಟ್ಟಡ ನಿರ್ಮಾಣಗೊಳ್ಳುತ್ತಿರುವುದು ವೈಯಕ್ತಿಕವಾಗಿ ಸಂತಸ ತಂದಿದೆ. ಈ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಸಹಕರಿಸಿದ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಅಭಿನಂದಿಸಿದರು.
ಜಿಲ್ಲೆಯ ಎಲ್ಲಾ ಕೈಗಾರಿಕೋದ್ಯಮಿಗಳು, ಉದ್ಯೋಗದಾತರು, ಕಾರ್ಮಿಕರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಈ ಸೌಲಭ್ಯದ ಲಾಭ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ 4-5ಕಾರ್ಖಾನೆಗಳು ಆರಂಭಗೊಳ್ಳುವ ನಿರೀಕ್ಷೆ ಇದೆ. ಈಗಾಗಲೆ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ ಮತ್ತು ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗಳಿಗೆ ಪುನಶ್ಚೇತನ ನೀಡಲು ಕ್ರಮ ವಹಿಸಲಾಗಿದೆ. ಮಾಚೇನಹಳ್ಳಿ ಕೈಗಾರಿಕಾ ವಲಯದಲ್ಲಿ ಈಗಾಗಲೇ ಒಂದು ಡಿಸ್ಪೆನ್ಸರಿ ಇದ್ದು, ಇನ್ನೊಂದು ಡಿಸ್ಪೆನ್ಸರಿ ಆರಂಭಿಸುವ ಅಗತ್ಯವಿದೆ ಎಂದವರು ನುಡಿದರು.
ಜಿಲ್ಲೆಯ ಸರ್ವಾಂಗೀಣ ವಿಕಾಸದ ದೃಷ್ಟಿಯಿಂದ ಇನ್ನಷ್ಟು ಮಹತ್ವದ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಿಶೇಷವಾಗಿ ಈಗಾಗಲೆ ಮಂಜೂರಾತಿ ಪಡೆದು ಪ್ರಗತಿ ಹಂತದಲ್ಲಿರುವ ಸಿಗಂದೂರು ಸೇತುವೆ, ಶಿವಮೊಗ್ಗ-ತುಮಕೂರು ಚತುಷ್ಟಥ ರಸ್ತೆ ನಿರ್ಮಾಣ, ಸೇತುವೆ ಮುಂತಾದ ಕಾಮಗಾರಿಗಳು ಶಿವಮೊಗ್ಗದ ಇತಿಹಾಸದಲ್ಲಿ ಮೈಲುಗಲ್ಲಾಗಿ ಉಳಿಯಲಿವೆ ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿವಮೊಗ್ಗ ಸೇರಿದಂತೆ ನೆರೆಯ ಜಿಲ್ಲೆಗಳ ಕಾರ್ಮಿಕರಿಗೆ ಈ ಆಸ್ಪತ್ರೆಯ ಪ್ರಯೋಜನ ದೊರೆಯಲಿದೆ ಎಂದರು.
ಕಾರ್ಮಿಕರಿಗೆ ಕೊಟ್ಟ ಮಾತಿನಂತೆ ಇ.ಎಸ್.ಐ. ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಇಂತಹ ಅನೇಕ ಮಹತ್ವದ ಕೇಂದ್ರ ಪುರಸ್ಕøತ ಯೋಜನೆಗಳು ಜಿಲ್ಲೆ ಮಾತ್ರವಲ್ಲ ರಾಜ್ಯದೆಲ್ಲೆಡೆ ನಡೆಯುತ್ತಿವೆ ಎಂದ ಅವರು ಬಹುದಿನಗಳಿಂದ ಸ್ಥಗಿತವಾಗಿದ್ದ ಯೋಜನೆ ಫಲಪ್ರದವಾಗುತ್ತಿರುವುದು ಸಂತಸ ತಂದಿದೆ ಎಂದರು.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ರುದ್ರೇಗೌಡ್ರು, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್, ಕಾಡಾ ಅಧ್ಯಕ್ಷೆ ಶ್ರೀಮತಿ ಪವಿತ್ರಾರಾಮಯ್ಯ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಆಂiÀರ್iವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ದತ್ತಾತ್ರಿ, ಮನೋಜ್‍ಶೇಟ್, ಬಿ.ಆರ್.ವಾಸುದೇವ್, ಇಂಜಿನಿಯರ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

error: Content is protected !!