ಶಿವಮೊಗ್ಗ ಜುಲೈ 27 : ಜಿಲ್ಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ಅರ್ಹ ರೈತರು ಮುಂದಿನ ಕಂತು ತಮ್ಮ ಖಾತೆಗೆ ಜಮೆಯಾಗಲು ಈ ಕೂಡಲೇ ತಮ್ಮ ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ(ಸಿಎಸ್ಸಿ)ವನ್ನು ಇ-ಕೆವೈಸಿ ಮಾಡಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.