ಪ್ರಸ್ತುತ ಹೆಚ್ಚು ಮಳೆ, ಮೋಡಕವಿದ ಮಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಮತ್ತು ಸೂರ್ಯನ ಬೆಳಕಿನ ಕೊರತೆಯಿಂದ ಕೊಳೆ ರೋಗವು ಉಲ್ಬಣವಾಗುವ ಸಾಧ್ಯತೆ ಹೆಚ್ಚಿರುವುದರಿಂದ ಈ ಕೆಳಕಂಡ ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು
o ತೋಟಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಬಸಿಗಾಲುವೆ ಚೊಕ್ಕ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದು.
o ಗಾಳಿ ಆಡುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು.
o ಮುಂಜಾಗ್ರತವಾಗಿ ಶೇ.1 ರ ಬೋರ್ಡೋದ್ರಾವಣ ಅಥವಾ ಶೇ.0.2 ರ ಮೆಟಲಾಕ್ಸಿಲ್ ಎಂ.ಜಡ್ (2 ಗ್ರಾಂ 1 ಲೀ ನೀರಿನಲ್ಲಿ ಕರಗಿಸಿ) ಅಥವಾ ಶೇ. 0.3 ರ ತಾಮ್ರದ ಆಕ್ಸಿಕ್ಲೋರೈಡ್ (3 ಗ್ರಾಂ 1.0 ಲೀ ನೀರಿನಲ್ಲಿ ಕರಗಿಸಿ) ದಿಂದ ಗೊನೆಗಳಿಗೆ ಹಾಗೂ ಎಲೆ ತೊಟ್ಟು, ಹೊಡೆ ಭಾಗ ಮತ್ತು ಸುಳಿಭಾಗಗಳು ಚೆನ್ನಾಗಿ ನೆನೆಯುವಂತೆ ಸೂಕ್ತ ಅಂಟಿನೊಂದಿಗೆ (ರಾಳ) ಸಿಂಪರಣೆ ಮಾಡಿ.
o ಈ ಮೇಲಿನ ಕ್ರಮಗಳನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಅನುಸರಿಸಿದಲ್ಲಿ ಮರಗಳನ್ನು ಸುಳಿಕೊಳೆ ಅಥವಾ ಶಿರಕೊಳೆಯಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪಕಿ೯ಸಿ:

ಡಾ. ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ ನವಿಲೆ, ಶಿವಮೊಗ್ಗ ದೂರವಾಣಿ ಸಂಖ್ಯೆ: 9535250742

error: Content is protected !!