ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ ಕೋಳಿ ಸಾಕಣಿಕೆ ” (10 ದಿನಗಳ) ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 7ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು 25/11/2019 ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು)
ಇವರಿಗೆ ಕೂಡಲೇ / ತಕ್ಷಣವೇ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9590601990
9743429595, 9449371579, 9538271653,
ಅಥವಾ ದೂರವಾಣಿ ನಂ: 08182-245721,
ಸಂಪರ್ಕಿಸಿ.

error: Content is protected !!