ಶಿವಮೊಗ್ಗ ತಾಲೂಕಿನ ಸಂತೆಕಡೂರು, ಕೊರಲಹಳ್ಳಿ, ಸೋಗಾನೆ, ನಿಧಿಗೆ, ಬಿಧರೆ, ಹಸೂಡಿ, ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ತಾಲೂಕು ಆಡಳಿತ ಸಹಭಾಗಿತ್ವದಲ್ಲಿ ಭೇಟಿ ನೀಡಿ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣ ಕುರಿತಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಗ್ರಾಮಾಂತರ ಶಾಸಕ ಶ್ರೀ ಕೆ.ಬಿ. ಅಶೋಕ ನಾಯ್ಕ ‘ಕೋವಿಡ್-19 ಟಾಸ್ಕ್ ಫೋರ್ಸ್ ಸಮಿತಿ’ಯ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಕರೋನ ನಿರ್ವಹಣೆ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರೋನ ರೋಗಿಗಳ ಸಂಖ್ಯೆ, ವ್ಯಾಕ್ಸಿನ್ ಲಭ್ಯತೆ ಸೇರಿದಂತೆ ಕರೋನ ತಡೆಗಟ್ಟಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಶುಚಿತ್ವ, ಸಾಮಾಜಿಕ ‌ಅಂತರ ಕಾಪಾಡಿಕೊಳ್ಳುವುದು, ಸೂಕ್ತ ಚಿಕಿತ್ಸೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಕೋವಿಡ್ ರೋಗವನ್ನು ನಿಯಂತ್ರಿಸುವ ಕುರಿತಂತೆ ಗ್ರಾಮಸ್ಥರಿಗೆ ಅರಿವು ಮೂಡಿಸುವಂತೆ ಈ ಸಭೆಯಲ್ಲಿ ‌ಮನವಿ ಮಾಡಿದರು.ಕೋವಿಡ್ ನಿಂದ ಮೃತಪಟ್ಟವರಿಗೆ ಐದು ಸಾವಿನ ರೂ ಧನ ಸಹಾಯ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕಲ್ಲಪ್ಪ ,ನಿಕಟ ಪೂರ್ವ ತಾ. ಪಂ. ಸದಸ್ಯರಾದ ಮುನಿರತ್ನ, ಕೆ.ಜಿ.ಶ್ರೀ ಧರ್, ತಾಲೂಕು ಪ್ರಧಾನ ಕಾರ್ಯದರ್ಶಿ ಗೋಪಾಲ್, ಮುಖಂಡರಾದ ಗಣೇಶ್, ಮಣಿಕಂಠ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

error: Content is protected !!