ಶಿವಮೊಗ್ಗ ಜುಲೈ 22 : ಜುಲೈ 23 ರಂದು ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ಪ್ರಯುಕ್ತ ಸುಗಮ ಸಂಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾದಿಕಾರಿಗಳು ಕೆಲ ಷರತ್ತು ವಿಧಿಸಿ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ.
ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್‍ಗಳು ಮತ್ತು ಸಿಟಿ ಬಸ್‍ಗಳು ಹಾಗೂ ಕಾರು ವಾಹನಗಳು ಬೈಪಾಸ್‍ರಸ್ತೆ ಮುಖಾಂತರ ಹೋಗುವುದು. ಶಿವಮೊಗ್ಗ ನಗರದಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೊನ್ನೂರು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್‍ಗಳು ಮತ್ತು ಸಿಟಿ ಬಸ್‍ಗಳು ಹಾಗೂ ಕಾರು ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗವ ಎಲ್ಲಾ ಭಾರಿ ವಾಹನ ಮತ್ತು ಬಸ್‍ಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ರಸ್ತೆ ಮಾರ್ಗವಾಗಿ ಶಿವಮೊಗ್ಗ ನಗರಕ್ಕೆ ಹೋಗುವುದು. ಹೊಳೆಹೊನ್ನೂರು ಸರ್ಕಲ್‍ನಿಂದ ಗುರುಪುರದ ಯಲವಟ್ಟಿ ಕ್ರಾಸ್‍ವರೆಗೆ ಸಾರ್ವಜನಿಕ ವಾಹನಗಳು ಓಡಾಡದಂತೆ ನಿಷೇಧಿಸಿದೆ. ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಲಘು ವಾಹನಗಳು ಯಲವಟ್ಟಿ ದೊಡ್ಡ ತಾಂಡ ಕ್ರಾಸ್‍ನಿಂದ, ಯಲವಟ್ಟಿ ಸಣ್ಣ ತಾಂಡ, ಯಲವಟ್ಟಿ ಮಾರ್ಗವಾಗಿ ಮಲವಗೊಪ್ಪ ಮೂಲಕ ಬಿ.ಹೆಚ್.ರಸ್ತೆ ಸೇರಿಕೊಂಡು ಬೈಪಾಸ್ ರಸ್ತೆ ಮಾರ್ಗವಾಗಿ ಶಿವಮೊಗ್ಗ ನಗರಕ್ಕೆ ಹೋಗುವುದು.
ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವ ಲಘು ವಾಹನಗಳು ಬೈಪಾಸ್ ರಸ್ತೆಯ ಮಾರ್ಗವಾಗಿ ಮಲವಗೊಪ್ಪದ ಯಲವಟ್ಟಿ ಕ್ರಾಸ್‍ನಿಂದ ಯಲವಟ್ಟಿ ಮಾರ್ಗವಾಗಿ ದೊಡ್ಡತಾಂಡ ಕ್ರಾಸ್ ಮೂಲಕ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವುದು. ಹರಿಹರ ಹೊನ್ನಾಳಿಯಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್‍ಗಳನ್ನು 100 ಅಡಿ ರಸ್ತೆ, ವಿನೋಬನಗರ ಮಾರ್ಗವಾಗಿ ಹೋಗುವುದು.
ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು, ಚನ್ನಗಿರಿ, ಚಿತ್ರದುರ್ಗಕ್ಕೆ ಹೋಗುವ ಮತ್ತು ಬರುವ ಎಲ್ಲಾ ಭಾರೀ ವಾಹನಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಹೊನ್ನಾಳಿ ರಸ್ತೆ, ಹೊಳಲೂರು, ತುಂಗಭದ್ರ ಸೇತುವೆ, ಸನ್ಯಾಸಿಕೋಡಮಗ್ಗಿ, ಹೊಳೆಹೊನ್ನೂರು ಮೂಲಕ ಸಂಚರಿಸುವುದು.
ಮೇಲ್ಕಂಡ ಎಲ್ಲಾ ಮರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.