ಶಿವಮೊಗ್ಗ, ಜೂನ್ 14, : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿ: 27/06/2023 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯ ಎಲ್ಲ ಆಹಾರ ಶಿರಸ್ತೆದಾರರು/ಆಹಾರ ನಿರೀಕ್ಷಕರು ತಮ್ಮ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ವಿತರಣಾ ಕಾರ್ಯವನ್ನು ಕಡ್ಡಾಯವಾಗಿ ಮುಕ್ತಾಯಗೊಳಿಸುವಂತೆ ಹಾಗೂ ಯಾವುದೇ ಪಡಿತರ ಚೀಟಿದಾರರಿಗೆ ಅವರ ಹಕ್ಕಿನ ಪಡಿತರ ನಿರಾಕರಣೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.