ಭಾರತದಲ್ಲಿ ಪ್ರತಿದಿನ ಸುಮಾರು 6000 ರೋಗಗಳಿಗೆ ಕ್ಷಯರೋಗ ಕಂಡುಬರುತ್ತಿದ್ದು ಸುಮಾರು 600 ಜನ (5 ನಿಮಿಷಕ್ಕೆ 2 ರೋಗಿಗಳು) ಸಾವನಪ್ಪುತ್ತಿದ್ದಾರೆ. ಸತತ 2 ವಾರಗಳ ಕೆಮ್ಮು ಮತ್ತು ಕಫ, ಸಂಜೆ ಜ್ವರ ಎದೆನೋವು ರಾತ್ರಿವೇಳೆ ಬೆವರುವುದು, ತೂಕ ಕಡಿಮೆಯಾಗುವುದು, ಕೆಲವೊಮ್ಮೆ ಕಫದಲ್ಲಿ ರಕ್ತ ಬೀಳುವುದು ಕ್ಷಯ ರೋಗದ ಮುಖ್ಯ ಲಕ್ಷಣಗಳಾಗಿರುತ್ತವೆ.
ಕ್ಷಯ ರೋಗವು ಕೆಮ್ಮುವಾಗ ಮತ್ತು ಸೀನುವಾಗ ತುಂತರು ಹನಿಗಳಿಂದ ಗಾಳಿಯ ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 2021ರಲ್ಲಿ 18822 ಶಂಕಿತರಿಗೆ ಕಫ ಪರೀಕ್ಷೆ ಮಾಡಿಸಿ 1204 ಕ್ಷಯ ರೋಗಿಗಳನ್ನುಪತ್ತೆ ಹಚ್ಚಿ ಡಾಟ್ಸ್ ಚಿಕಿತ್ಸೆ ಫ್ರಾರಂಬಿಸಲಾಗಿದೆ. ಹಾಗೇಯೆ 39 ಎಂ ಡಿ ಆರ್ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ಫ್ರಾರಂಬಿಸಲಾಗಿದೆ.
ಡಾ. ದಿನೇಶ್ ಜಿ.ಪಿ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ: ಮಾಹಿತಿ ನೀಡಿ ಶಿವಮೊಗ್ಗ ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಮತ್ತು ಸಮುದಾಯಗಳಲ್ಲಿ ಕೊಳಚೆ ಪ್ರದೇಶಗಳಲ್ಲಿ ಗಣಿಗಾರಿಕಾ ಪ್ರದೇಸಗಳಲ್ಲಿ ಕಾರ್ಖಾನೆಗಳಲ್ಲಿ ಹೆಚ್ಐವಿ ಭಾಧಿತರಲ್ಲಿ ಮಧುಮೇಹ ಹಾಗು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಇರುವ ಪ್ರದೇಶಗಳಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಾಹಿತಿ ಶಿಕ್ಷಣ ಸಂಪರ್ಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ.
ಈ ವರ್ಷ ಕ್ಷಯರೋಗ ನಿರ್ಮೂಲನೆಗೆ ಜಿಲ್ಲೆಯ 19 ಗ್ರಾಮ ಪಂಚಾಯಿತಿಗಳು ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿದ್ದು ಈ ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ ಮತ್ತು ಎಲ್ಲಾ ಸದ್ಯರುಗಳಿಗೆ ತರಬೇತಿ ನೀಡಿ ಕ್ಷಿಪ್ರ ಕಾರ್ಯಪಡೆ ರಚನೆ ಮಾಡಿ ಚಡುವಟಿಕೆಗಳನ್ನು ಪ್ರಾರಂಬಿಸಲಾಗಿರುತ್ತದೆ. ಅಲ್ಲದೇ ಕ್ಷಯ ಮುಕ್ತ ಗ್ರಾಮ ಪಂಚಾಯತ್ ಅಡಿಯಲ್ಲಿ ಬೀದಿ ನಾಟಕಗಳು, ಶಾಲಾ ಕಾಲೆಜುಗಳಲ್ಲಿ ರಸ ಪ್ರಶ್ನೆ ಮತ್ತು ಫ್ರಬಂಧ ಸ್ಪರ್ದೆಕ್ಷಯಮುಕ್ತ ಸಮಾಜದ ಬಗ್ಗೆ ಚಟುವಟಿಗಳನ್ನು ನಡೆಸಲಾಗಿರುತ್ತದೆ ಎಂದು ತಿಳಿಸಿದರು.
ಕ್ಷಯ ರೋಗ ನಿರ್ಮೂಲನೆಗೆ ಜಿಲ್ಲೆಯು ಆಯ್ಕೆಯಾಗಿರುವುದರಿಂದ ಟಿಬಿ ಪ್ರಕರಣಗಳಿರುವ ಮನೆಗಳಲ್ಲಿ ಸಂಪರ್ಕದಲ್ಲಿರುವವರಿಗೆ ಐ.ಜಿ.ಆರ್.ಎ ರಕ್ತ ಪರೀಕ್ಷೆ ಮುಖಾಂತರ ಟಿಬಿ ಸೋಂಕನ್ನು ಕಂಡು ಹಿಡಿಯುವ ಪರೀಕ್ಷೆ ಯನ್ನು ಪ್ರಾರಂಭಿಸಲಾಗಿದೆ. ಈ ಪರೀಕ್ಷೆಯಿಂದ ರಕ್ತದಲ್ಲಿ ಟಿಬಿ ಬ್ಯಾಕ್ಟೀರೀಯಾ ಕಂಡುಬಂದಲ್ಲಿ ಮುಂದೆ ಟಿಬಿ ಬಾರದಂತೆ ಕಿಮೋಪ್ರೋಲ್ಯಾಕ್ಸಿಸ್ ಚಿಕಿತ್ಸೆ ನೀಡಲಾಗುತ್ತದೆ.
ರಾಷ್ಟ್ರೀಯ ಕ್ಷಯರೋಗ ಕಾರ್ಯಕ್ರಮದಡಿಯಲ್ಲಿ ಕೇಂದ್ರ ತಂಡವು ಶಿವಮೊಗ್ಗ ಜಿಲ್ಲೆಯಲ್ಲಿ ಎಸ್.ಎನ್.ಸಿ ಸಮೀಕ್ಷ ನಡೆಸಿ ಶಿವಮೊಗ್ಗ ಜಿಲ್ಲೆಗೆ ರಾಷ್ಟ್ರ ಮಟ್ಟದ ಕಂಚಿನ ಪದಕ ಪ್ರಶಸ್ತಿ ದೊರತಿದೆ.