ಇಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಶಾಖೆ, ಶಿವಮೊಗ್ಗ, ಹೊನ್ನಾಳಿ ತಾಲ್ಲೂಕು ಆಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕೇಂದ್ರ ಪುರಸ್ಕೃತ ಡಿಜಿಟಲ್ ಇಂಡಿಯಾ ಮತ್ತು ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಆಧುನಿಕ ತಂತ್ರಜ್ಞಾನದಿಂದ ಮಾಹಿತಿ ಅತಿ ಶೀಘ್ರದಲ್ಲಿ ಜನರನ್ನುತಲುಪುತ್ತಿದೆ ಇ- ಆಡಳಿತ,ಇ-ಹೆಲ್ತ್, ಇ-ಶಿಕ್ಷಣ ಹೀಗೆ ಹಲವು ಕ್ಷೇತ್ರಗಳಲ್ಲಿ ತಂತ್ರಜ್ಞಾನ ಹಾಸುಹೊಕ್ಕಾಗಿದೆ. ಡಿಜಿಟಲ್ ಇಂಡಿಯಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಿಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದರು.
ದಾವಣಗೆರೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಕಾರಾಧ್ಯ ಅವರು ವಿಶ್ವ ಜನ ಸಂಖ್ಯಾ ದಿನಾಚರಣೆಯ ಬಗ್ಗೆ ಮಾತನಾಡಿ ಕುಟುಂಬ ಯೋಜನೆಯ ಮಹತ್ವವನ್ನು ತಿಳಿಸಿದರು.ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಡಾ. ಟಿ.ವಿದ್ಯಾ ಟಿ ಪವಾರ್, ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆತ್ಮ ನಿರ್ಭರ ಭಾರತದ ಬಗ್ಗೆ ಮಾತನಾಡಿದರು.
ಶ್ರೀಮತಿ ಅಕ್ಷತಾ ಸಿ.ಹೆಚ್. ಕ್ಷೇತ್ರ ಪ್ರಚಾರಾಧಿಕಾರಿ ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸಿ ಯೋಜನೆಯ ಅನುಷ್ಠಾನವನ್ನು ಯಶಸ್ವಿಗೊಳಿಸುವುದು ಜಾಗೃತಿ ಅಭಿಯಾನದ ಉದ್ದೇಶವಾಗಿದೆ ಯೋಜನೆಯ ಅನುಕೂಲತೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಇಂಥಹ ಅರಿವಿನ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ಡಾ.ಸುರೇಶ್ ಭಾರ್ಕಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ, ಡಾ.ಗಿರೀಶ್ ತಾಲ್ಲೂಕು ಆರೋಗ್ಯಾಧಿಕಾರಿ, ಶ್ರೀ ಮಹಾ0ತಸ್ವಾಮಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
.