ಶಿವಮೊಗ್ಗ, ಆಗಸ್ಟ್ 27 : ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು ಸೆ.01 ರಿಂದ 10 ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರು/ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
