ಶಿವಮೊಗ್ಗ, ಆಗಸ್ಟ್ 04 : ಪಶುಪಾಲನಾ ಇಲಾಖೆಯು ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರ ಮತ್ತು ಹಸುಗಳ ರಬ್ಬರ್ ನೆಲಹಾಸುಗಳನ್ನು ವಿತರಿಸಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.
ಜಿಲ್ಲಾವಾರು ನೀಡಬಹುದಾದ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಈಗಾಗಲೇ ಗುರಿ ನಿಗಧಿಪಡಿಸಲಾಗಿದ್ದು, ವಿಧಾನಸಭಾ ಕ್ಷೇತ್ರವಾರು ಗುರಿಗಳನ್ನು ಮರುಹಂಚಿಕೆ ಮಾಡಲಾಗುವುದು. ಅರ್ಜಿದಾರರು ಹೈನುಗಾರಿಕೆಯಲ್ಲಿ ಅನುಭವವುಳ್ಳವರಾಗಿರಬೇಕು. ಕನಿಷ್ಟ 2ಹಾಲು ಕರೆಯುವ ಮಿಶ್ರತಳಿ ರಾಸುಗಳನ್ನು ಹೊಂದಿದ್ದು, ರಾಸುಗಳಿಗೆ ಕಿವಿಯೋಲೆ ಅಳವಡಿಸಿರಬೇಕು. ಇದಕ್ಕೆ ಸ್ಥಳೀಯ ಪಶುವೈದ್ಯರಿಂದ ದೃಢೀಕರಣ ಪತ್ರ ಪಡೆದಿರಬೇಕು. ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ಫಲಾನುಭವಿಗಳ ಆಯ್ಕೆಯನ್ನು ಸಂಬಂಧಿಸಿದ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯಿಂದ ಮಾಡಲಾಗುವುದು.
ಅರ್ಹ ಅರ್ಜಿದಾರರು ಆಯಾ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳಿಂದ ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 18ರೊಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಶಿವಮೊಗ್ಗ-9482635093, ಭದ್ರಾವತಿ-9986624123, ತೀರ್ಥಹಳ್ಳಿ-9448792886, ಹೊಸನಗರ-9448165747, ಸಾಗರ-9448007542, ಸೊರಬ-9481255897, ಶಿಕಾರಿಪುರ-9482635093ನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.