ಶಿವಮೊಗ್ಗ, ಸೆಪ್ಟೆಂಬರ್ 21: ಮಹಾನಗರಪಾಲಿಕೆ ವತಿಯಿಂದ ಸೆಪ್ಟೆಂಬರ್ 23 ರ ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಪೌರಕಾರ್ಮಿಕರ ದಿನಾಚರಣೆ-2021 ನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೊರೊನಾದಿಂದ ಮರಣ ಹೊಂದಿದ ಕೊರೊನಾ ವಾರಿಯರ್ಸ್ ಕುಟುಂಬದವರು ನೆರವೇರಿಸುವರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರ ಗೌರವ ಉಪಸ್ಥಿತಿ ಇರಲಿದ್ದು, ಪಾಲಿಕೆ ಮಹಾಪೌರರಾದ ಸುನೀತಾ ಎಸ್ ಅಣ್ಣಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಗೃಹ ಮಂತ್ರಿಗಳಾದ ಆರಗ ಜ್ಞಾನೇಂದ್ರ, ಸಂಸದರಾದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಮತ್ತು ವಿಧಾನ ಸಭಾ ಶಾಸಕರು, ಪಾಲಿಕೆ ಉಪ ಮಹಾಪೌರರು, ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ರಾಜ್ಯ ಮಹಾನಗರಪಾಲಿಕೆಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳು, ಶಾಖಾ ಸಂಘದ ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಪಾಲಿಕೆ ಆಯುಕ್ತರು, ಇತರೆ ಅಧಿಕಾರಿಗಳು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ 2020-21ನೇ ಸಾಲಿನಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರನ್ನು ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
