ಸನ್ಮಾನ್ಯ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ.ಎಸ್. ಅರುಣ್ ರವರು ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡುತ್ತ ಉಡುಪಿಯ ಮಹಿಳಾ ಕಾಲೇಜಿನಲ್ಲಿ ಡಿಸೆಂಬರ್-2021ರಂದು 6 ವಿದ್ಯಾರ್ಥಿನಿಯರುಗಳಿಂದ ಆರಂಭವಾದ ಹಿಜಾಬ್ ವಿವಾದ ರಾಜ್ಯದಲ್ಲೆಡೆ ಹಾಗೂ ದೇಶದಲ್ಲಿಯು ಸಹ ಭಾರಿ ಕೋಲಾಹಲ ಸೃಷ್ಟಿಸಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ.
ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಿದ್ದ ಹಿಜಾಬ್ ಧಾರಿಗಳ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.
ಕರ್ನಾಟಕ ಹೈಕೋರ್ಟಿನ ತ್ರಿಸದಸ್ಯ ಪೀಠದಿಂದ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲವೆಂದು ಹೈಕೋರ್ಟ್ ತೀರ್ಪನ್ನು ಪ್ರಕಟಿಸಿದೆ. ಸಮವಸ್ತ್ರ ಕುರಿತು ಸರ್ಕಾರ ಏನು ಆದೇಶ ನೀಡಿತ್ತೋ ಅದು ಸರಿಯಾಗಿದೆ, ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ತಿಳಿದು ಬಂದಿದೆ.
ಘನ ಕರ್ನಾಟಕ ಉಚ್ಚ ನ್ಯಾಯಾಲಯವು ತೀರ್ಪು ಪ್ರಕಟಗೊಂಡರೂ ಕೆಲವು ಮುಸ್ಲಿಂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿರುವುದು ದುರದೃಷ್ಟಕರ ಸಂಗತಿಯಾಗಿದೆ. ಅಲ್ಲದೇ ಈ ಮುಸ್ಲಿಂ ಸಂಘಟನೆಗಳು ಘನ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಿರುವುದು ಸಹ ದುರದೃಷ್ಟಕರವಾಗಿರುತ್ತದೆ. ಈ ಬಂದ್‌ನಿಂದ ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮುಂತಾದ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡು ವ್ಯಾಪಾರ ಮುಂಗಟ್ಟುಗಳು ಅಸ್ತವ್ಯಸ್ಥಗೊಂಡಿರುವುದು ವಿಷಾದನೀಯವಾಗಿದೆ.
ಈ ಮುಸ್ಲಿಂ ಸಂಘಟನೆಗಳು ಘನ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಘನ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿದೆ. ಆದರೆ, ಘನ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಪ್ರತಿಭಟನೆ, ಬಂದ್, ಮಾಡಲು ಈ ಸಂಘಟನೆಗಳಿಗೆ
ಅವಕಾಶವಿರುವುದಿಲ್ಲ.
ಸರ್ಕಾರವು ಇಂತಹ ಸಂಘಟನೆಗಳ ವಿರುದ್ಧ ಕ್ರಮ ಜರುಗಿಸಿ, ರಾಜ್ಯದಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಬಂದ್ ಮಾಡದಂತೆ ತಡೆಗಟ್ಟಲು ಕ್ರಮ ಜರುಗಿಸುವಂತೆ ಮಾನ್ಯ ಗೃಹ ಸಚಿವರ ಗಮನಕ್ಕೆ ತರಬಯಸುತ್ತೇನೆ. ಎಂದು ಶಾಸಕರಾದ ಶ್ರೀ ಡಿ. ಎಸ್. ಅರುಣ್ ತಿಳಿಸಿದರು.

error: Content is protected !!