ಶಿವಮೊಗ್ಗ, ಮಾರ್ಚ್ 15 : ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 24ರಂದು ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಮಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಖುದ್ದು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೋದಿಯವರು ಗ್ರಾಮದ ಭೇಟಿ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯವೈಖರಿಗಳ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ, ದೇಶದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ವ್ಯವಸ್ಥೆಯ ಸುಧಾರಣೆ ಕುರಿತು ಸಂದೇಶ ನೀಡುವುದರ ಜೊತೆಗೆ ಸೂಕ್ತ ಸಲಹೆ ಮಾರ್ಗದರ್ಶನ ನೀಡುತ್ತಿರುವುದು ವಿಶೇಷ ಎಂದವರು ನುಡಿದರು.
ಅಲ್ಲದೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನದಲ್ಲಿರುವ ಯೋಜನೆಗಳ ಕುರಿತು ಈಗಾಗಲೇ ಸಮಾಲೋಚನೆ ನಡೆಸಲಾಗಿದೆ ಎಂದ ಅವರು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅನೇಕ ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಗಿದೆ. ಹೊಳಲೂರಿನಲ್ಲಿ ಉದ್ಯೋಗಖಾತ್ರಿ ಯೋಜನೆಯ ಪ್ರಗತಿ ಉತ್ತಮವಾಗಿದೆ. ಮಾರ್ಚ್ ಮಾಸಾಂತ್ಯದೊಳಗಾಗಿ ಮನೆಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಕಾರ್ಯ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
ಅಂತೆಯೇ ಸಂಗ್ರಹವಾಗುವ ತ್ಯಾಜ್ಯವನ್ನು ಒಣ ಮತ್ತು ಹಸಿಕಸವನ್ನಾಗಿ ಬೇರ್ಪಡಿಸಿ, ಸಮರ್ಪಕವಾಗಿ ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕಾಗಿ ಮಹಿಳಾ ವಾಹನ ಚಾಲಕರಿಗೆ ತರಬೇತಿಯೊಂದಿಗೆ ವಾಹನ ನೀಡಿ, ಗ್ರಾಮದ ಸ್ವಚ್ಚತಾ ಕಾರ್ಯಕ್ಕೆ ನಿಯೋಜಿಸಿರುವುದು ವಿಶೇಷವಾಗಿದೆ. ಅಲ್ಲದೇ ಗ್ರಾಮಕ್ಕೆ ಸಮುದಾಯ ಶೌಚಾಲಯವನ್ನು ನಿರ್ಮಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ಈ ಶೌಚಾಲಯವು ಸದಾ ಬಳಕೆಯಲ್ಲಿರುವಂತೆ ಹಾಗೂ ಸ್ವಚ್ಚವಾಗಿರುವಂತೆ ನೋಡಿಕೊಳ್ಳಲು ಅಗತ್ಯ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ ಎಂದರು.

  • ಪಶುವೈದ್ಯ ಸೇವಾ ಇಲಾಖೆಯ ಸೇವೆ ನಿರಂತರವಾಗಿದೆ. ಸ್ವಸಹಾಯ ಗುಂಪುಗಳ ಆಸಕ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿಯನ್ನು ನೀಡಿ, ಬ್ಯಾಂಕುಗಳಿಂದ ಸಾಲಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೇ ವಿದ್ಯಾವಂತೆ ನಿರುದ್ಯೋಗಿ ಮಹಿಳೆಯರಿಗೆ ನರ್ಸರಿ, ಹೊಲಿಗೆ ಮುಂತಾದ ತರಬೇತಿಗಳನ್ನು ನೀಡಲಾಗಿದೆ. ಡಿಜಿಟಲ್ ಲೈಬ್ರರಿ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಗ್ರಾಮ ಸಭೆ ನಡೆಸಿ, ಗ್ರಾಮಸ್ಥರಿಂದ ಇನ್ನಷ್ಟು ಅಹವಾಲುಗಳನ್ನು ಸ್ವೀಕರಿಸಿ, ಅವುಗಳ ಇತ್ಯರ್ಥಕ್ಕೆ ಕ್ರಮ ವಹಿಸಲಾಗುವುದು.
    _ ಶ್ರೀಮತಿ ಎಂ.ಎಲ್.ವೈಶಾಲಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಶಿವಮೊಗ್ಗ.
  • ಹೊಳಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ವೈದ್ಯರ ನೇಮಕಾತಿಗೆ ಕ್ರಮವಹಿಸಲಾಗಿದೆ. ಅಲ್ಲದೇ ರಾತ್ರಿಪಾಳಿ ಸೇವೆಗೆ ವೈದ್ಯರನ್ನು ಶೀಘ್ರದಲ್ಲಿ ನಿಯೋಜಿಸಲಾಗುವುದು. ಡಾ|| ರಾಜೇಶ್ ಸುರಗೀಹಳ್ಳಿ.
error: Content is protected !!