ಶಿವಮೊಗ್ಗ, ಮಾರ್ಚ್ 12 : ಸಮಾಜ ಕಲ್ಯಾಣ ಇಲಾಖೆಯು 2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರೋತ್ಸಾಹಧನ ಪಡೆಯಲಿಚ್ಚಿಸುವ ಅಭ್ಯರ್ಥಿಯು ಇಲಾಖೆಯ ಅಂತರ್ಜಾಲ ತಾಣ : ತಿತಿತಿ.sತಿ.ಞಚಿಡಿ.ಟಿiಛಿ.iಟಿ ಮೂಲಕ ಮಾರ್ಚ್ 23 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಹದೇವಿ ಟಾಕೀಸ್ ಎದುರು, ಬಿ.ಹೆಚ್.ರಸ್ತೆ, ವಿದ್ಯಾನಗರ, ಶಿವಮೊಗ್ಗ, ದೂರವಾಣಿ ಸಂಖ್ಯೆ 08182-240512ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.