ಶಿವಮೊಗ್ಗ: ಅಕ್ಟೋಬರ್ 15 : ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಯಾದ ಬೇಟಿ ಬಚಾವೋ-ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ರೂ.2.00 ಲಕ್ಷ ನಗದು ಉತ್ತೇಜನ ನೀಡುವುದಾಗಿ ಕೆಲವು ಅನಧಿಕೃತ ಸಂಘಟನೆಗಳು/ಸ್ವಯಂ ಸೇವಾ ಸಂಸ್ಥೆಗಳು/ವ್ಯಕ್ತಿಗಳು ಹೆಣ್ಣು ಮಕ್ಕಳ ವೈಯುಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಸಾರ್ವಜನಿಕರು ಜಾಗರೂಕರಾಗಿರುವಂತೆ ತಿಳಿಸಲಾಗಿದೆ.

ಬೇಟಿ ಜಚಾವೋ ಬೇಟಿ ಪಡಾವೋ ಯೋಜನೆಯಡಿಯಲ್ಲಿ ಯಾರಿಗೂ ನಗದು ವಿತರಣೆ ಮಾಡುವ ಕಾರ್ಯಕ್ರಮ ಇರುವುದಿಲ್ಲ. ಅನಧಿಕೃತ ಸಂಸ್ಥೆಗಳು/ವ್ಯಕ್ತಿಗಳು ಈ ಯೋಜನೆಯಡಿ ಹಣವನ್ನು ನೀಡುವುದಾಗಿ ಭರವಸೆ ನೀಡಿ ಸಾರ್ವಜನಿಕರನ್ನು ಮೋಸ ಮಾಡುತ್ತಿವೆ. ಈ ರೀತಿಯ ವಂಚನೆಯನ್ನು ಮಾಡುವ ಅಥವಾ ಪ್ರಚಾರ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇಂತಹ ವಂಚನೆಗಳು ಬೆಳಕಿಗೆ ಬಂದಾಗಲೆಲ್ಲಾ ಎಫ್.ಐ.ಆರ್.ಗಳನ್ನು ಈಗಾಗಲೇ ನೊಂದಾಯಿಸಲಾಗಿದೆ. ಇಂತಹ ವಂಚಕರ ಬಲೆಗೆ ಬೀಳದಂತೆ ಸಾರ್ವಜನಿಕರಿಗೆ ಸಲಹೆ/ಸೂಚನೆ ನೀಡಲಾಗಿದೆ. ಈ ಯೋಜನೆಯಡಿ ವಂಚಕರು ನಮೂನೆಯಲ್ಲಿ ಕೋರುವ ಯಾವುದೇ ವೈಯಕ್ತಿಕ ವಿವರಗಳನ್ನು ಅಂದರೆ ಆಧಾರ್‍ಕಾರ್ಡ್, ಬ್ಯಾಂಕ್ ವಿವರಗಳು, ದೂರವಾಣಿ ಸಂಖ್ಯೆ/ಇ-ಮೇಲ್ ಐ.ಡಿ/ಇತರೆ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಬಾರದು. ಇಂತಹ ವಂಚನೆಗಳನ್ನು ಮಾಡುವವರ ಬಗ್ಗೆ ವ್ಯಕ್ತಿಗಳ/ಸಂಸ್ಥೆಗಳ ಹೆಸರನ್ನು ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!