ಶಿವಮೊಗ್ಗ, ಮೇ 08, :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಛೇರಿಯ ಆವರಣದಲ್ಲಿ ಮೇ.08 ರಂದು ವಿಧಾನಸಭಾ ಚುನಾವಣೆ ಪ್ರಯುಕ್ತ ಕಡ್ಡಾಯವಾಗಿ ಮತ ಚಲಾಯಿಸುವಂತೆ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ಮತದಾನದ ಪ್ರತಿಜ್ಞಾವಿಧಿ ಪ್ರಮಾಣವಚನ ಸ್ವೀಕರಿಸುವುದರ ಮೂಲಕ ಹಾಗೂ ಮತದಾನ ನನ್ನ ಹಕ್ಕು ಕಾರ್ಡ್ ನೀಡುವುದರ ಮೂಲಕ ಮತದಾನದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
ಪ್ರತಿಜ್ಞಾವಿಧಿಯನ್ನು ಬೋಧಿಸಿದ ಉಪನಿರ್ದೇಶಕರಾದ ಜಿ.ಜಿ ಸುರೇಶ ರವರು ಮತದಾನದ ಮಹತ್ವ ಹಾಗೂ ಮೇ.10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಪ್ರತಿಯೊಬ್ಬರು ಮತ ಚಲಾಯಿಸಬೇಕು ಹಾಗೂ ತಮ್ಮ ಕುಟುಂಬದ ಸದಸ್ಯರಿಗೂ ಕೂಡ ಮತ ಚಲಾಯಿಸುವಂತೆ ಜಾಗೃತಿ ನೀಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಅನೇಕ ಸದಸ್ಯರು ಭಾಗವಹಿಸಿದರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಅಧೀನ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

error: Content is protected !!