ಶಿವಮೊಗ್ಗ, ಜನವರಿ 06 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ 2020ನೇ ಜನವರಿ 6 ರಿಂದ 8ರ ವರೆಗೆ ಹದಿನೆಂಟು ವರ್ಷ ತುಂಬಿದವರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ದಿನಗಳಂದು ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾಗುವ ಎಲ್ಲಾ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುತ್ತಾರೆ. ಸಾರ್ವಜನಿಕರು ಮಿಂಚಿನ ನೋಂದಣಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವುದು.
ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಮತ್ತಿತರ ವಿವರಗಳು ತಪ್ಪಾಗಿದ್ದಲ್ಲಿ ಸರಿಪಡಿಸಲು, 113 ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ವರ್ಗಾವಣೆಯಾಗಿದ್ದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ಹಾಗೂ ಇದೇ ವಿಧಾನ ಸಭಾ ಕ್ಷೇತ್ರದ ಒಂದು ಮತಗಟ್ಟೆ ವ್ಯಾಪ್ತಿಯಿಂದ ಮತ್ತೊಂದು ಮತಗಟ್ಟೆ ವ್ಯಾಪ್ತಿಗೆ ವಲಸೆ ಹೋಗಿದ್ದಲ್ಲಿ ವಿಳಾಸ ಬದಲಾವಣೆಗಾಗಿ ಸಹ ಸಂಬಂಧಿಸಿದ ನಮೂನೆಗಳಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಜ. 15 ರೊಳಗೆ ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.