ಮೇ. 20. ಶಿವಮೊಗ್ಗ : ಮತ ಎಣಿಕೆ ಕಾರ್ಯ ನಡೆಯಲಿರುವ ಮೇ 23 ರಂದು ಬೆಳಿಗ್ಗೆ 6ರಿಂದ ಮೇ 24ರ ಬೆಳಿಗ್ಗೆ 6ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಕಲಂ 144 ಅನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಯಾವುದೇ ಮೆರವಣಿಗೆ, ಸಭೆ ಸಮಾರಂಭಗಳು, ವಿಜಯೋತ್ಸವ ಹಾಗೂ ಇತರ ಸಾರ್ವಜನಿಕ ಸಮಾವೇಶಗಳನ್ನು ನಡೆಸುವಂತಿಲ್ಲ. 5ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆ ಮದುವೆ, ಮುಂಜಿ , ಸಂತೆ ಇತ್ಯಾದಿ ಕಾರ್ಯಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ಉಲ್ಲಂಘಿಸುವವರು ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.