ಜಿಲ್ಲಾ ಆಡಳಿತ , ಜಿಲ್ಲಾಪಂಚಾಯತ್‌ ಹಾಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗಜಿಲ್ಲಾ ಆಡಳಿತ , ಜಿಲ್ಲಾಪಂಚಾಯತ್‌ ಹಾಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ

ಶಿವಮೊಗ್ಗ, ಜನವರಿ 16 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಅಂಗವಾಗಿ ಜನವರಿ 19ರಂದು ಜಿಲ್ಲೆಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಿದೆ.
ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಜನವರಿ 19ರಂದು ಮರೆಯದೇ ಪೋಲಿಯೋ ಲಸಿಕೆ ಹಾಕಿಸಿ. ಪೋಲಿಯೋ ರೋಗ ಮಕ್ಕಳಿಗೆ ಅಂಗವಿಕ¯ತೆ ಉಂಟು ಮಾಡಬಹುದಾಗಿದೆ. ಪೋಲಿಯೋ ಲಸಿಕೆ ಹಾಕಿಸುವುದರಿಂದ ಮಾತ್ರ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿದೆ. ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ತೆರೆದಿರುವ ಲಸಿಕಾ ಕೇಂದ್ರಗಳಲ್ಲಿ ಜನವರಿ 19ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಲಸಿಕೆ ಹಾಕಲಾಗುವುದು. ಶಿವಮೊಗ್ಗದ ಬಸ್‍ನಿಲ್ದಾಣದಲ್ಲಿಯೂ ಲಸಿಕಾ ಕೇಂದ ತೆರೆದಿರುತ್ತದೆ. ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ರಾಜೇಶ್ ಸುರಗೀಹಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!