ಶಿವಮೊಗ್ಗ ಜುಲೈ 15 : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನಕ್ಕೆ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ.
ಪ್ರಸ್ತುತ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮತ್ತು ಪರಿಹಾರ ವಿತರಿಸುವ ಹಾಗೂ ನಷ್ಟ ಅಂದಾಜು ಮಾಡುವ ಕಾರ್ಯದಲ್ಲಿ ಜಿಲ್ಲಾಡಳಿತವು ಕಾರ್ಯ ಪ್ರವೃತ್ತವಾಗಬೇಕಾಗಿದ್ದು, ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ನಡೆಸಲು ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಆದ್ದರಿಂದ ಹೆಚ್ಚು ಮಳೆಯಾಗುತ್ತಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಜುಲೈ 16 ರ ಮೂರನೇ ಶನಿವಾರದಂದು ಜರುಗಬೇಕಾಗಿರುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನಕ್ಕೆ ಜುಲೈ ಮಾಹೆಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕಂದಾಯ ಇಲಾಖೆ ಸರ್ಕಾರದ ಉಪಕಾರ್ಯದರ್ಶಿಗಳು ತಿಳಿಸಿದ್ದಾರೆ.

error: Content is protected !!