ಶಿವಮೊಗ್ಗ: ಮೇ-25 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮೈಸೂರು ನಗರದಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಿಂದ ಪಿಯುಸಿ ಮತ್ತು ಡಿಪ್ಲೊಮಾ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ರಾಜ್ಯ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಗಂಡು ಮಕ್ಕಳಿಗೆ ಆದ್ಯತೆ ಹಾಗೂ ಅರ್ಹತೆಯ ಮೇರೆಗೆ ಉಚಿತ ಪ್ರವೇಶ ನೀಡುತ್ತಿದ್ದು, ಮೈಸೂರು ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ನಂತರವೇ ನಿಲಯದಲ್ಲಿ ಪ್ರವೇಶ ನೀಡಲಾಗುವುದು.
ನಿಗಧಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮೈಸೂರು ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಮೇ 31ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.