News Next

ಶಿವಮೊಗ್ಗ, ಜುಲೈ-28 : 2021-22 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಹೋಬಳಿ ಮತ್ತು ಗ್ರಾಮ ಪಂಚಾಯತಿ ಹಾಗೂ ಬೆಳೆಗಳ ಘೋಷಣೆ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ರೈತರು ಘೋಷಿತ ಬೆಳೆಗಳ ವಿಮೆಗಾಗಿ ನೋಂದಾಯಿಸಿಕೊಳ್ಳಬಹುದು.
ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ (ಮಳೆ ಆಶ್ರಿತ) ಹಾಗೂ ಜೋಳ (ಮಳೆ ಆಶ್ರಿತ) ಮತ್ತು ಗ್ರಾಮ ಪಂಚಾಯತಿ ಮಟ್ಟಕ್ಕೆ ಭತ್ತ (ನೀರಾವರಿ/ ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಬೆಳೆಗಳು ಆಯ್ಕೆ ಯಾಗಿರುತ್ತವೆ.
ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್ ಇನ್‍ಶ್ಯೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ, ಸಂಸ್ಥೆ ಇವರ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುತ್ತಿದೆ.
ಮುಂಗಾರು ಹಂಗಾಮಿನ ಬೆಳೆ ವಿಮೆಗಾಗಿ ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಈ ಯೋಜನೆಯಡಿ ನೋಂದಾಯಿಸಲು ಮುಸುಕಿನ ಜೋಳ (ನೀರಾವರಿ/ ಮಳೆಆಶ್ರಿತ) ಬೆಳೆಗೆ ಜುಲೈ 31 ಭತ್ತ (ನೀರಾವರಿ/ಮಳೆಆಶ್ರಿತ), ಜೋಳ (ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ) ಬೆಳೆಗಳಿಗೆ ಆಗಸ್ಟ್ 16 ಅಂತಿಮ ದಿನಾಂಕಗಳಾಗಿರುತ್ತವೆ.
ಬೆಳೆ ವಿಮೆಗಾಗಿ ನೋಂದಾಯಿಸಲು ಅಂತಿಮ ದಿನಾಂಕದ ಒಳಗಾಗಿ  ರೈತರು ಹೆಚ್ಚಿನ  ಸಂಖ್ಯೆಯಲ್ಲಿ ಬೆಳೆ ವಿಮೆಗಾಗಿ ನೋಂದಾಯಿಸಿಕೊಳ್ಳುವಂತೆ ಕೋರಿದೆ. ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು. ತದನಂತರ ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ ಮತ್ತು ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್/ಆರ್ಥಿಕ ಸಂಸ್ಥೆಗಳು/ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ (ಅSಅ) ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಸಮೀಪವಿರುವ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಅಲ್ಲದೆ ಸಂರಕ್ಷಣೆ ವೆಬ್‍ಸೈಟ್‍ನಲ್ಲಿಯೂ (hಣಣಠಿ://sಚಿmಡಿಞshಚಿಟಿe.ಞಚಿಡಿಟಿಚಿಣಚಿಞಚಿ.gov.iಟಿ) ಸಹ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


     
 

     

error: Content is protected !!