ಶಿವಮೊಗ್ಗ, ಮೇ.27 : ಹೊಸನಗರ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದು,್ದ ಅರ್ಜಿಯನ್ನು ಆಯಾ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರಿಂದ ಪಡೆದು ಸಲ್ಲಿಸಲು ಸೂಚಿಸಲಾಗಿದೆ.
ಹೊಸನಗರ, ಮಾರುತಿಪುರ, ಕೋಡೂರು, ಯಡೂರು ಬಾಲಕರ ವಿದ್ಯಾರ್ಥಿನಿಲಯ ಹಾಗೂ ಹೊಸನಗರ, ಯಡೂರಿನ ಬಾಲಕಿಯರ ಹಾಸ್ಟೆಲ್‍ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಜೂನ್- 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 5 ರಿಂದ 9ನೇ ತರಗತಿಯಲ್ಲಿ ಓದುತ್ತಿರಬೇಕು ಹಾಗೂ 2018-19ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಜಿಯೊಂದಿಗೆ ಶಾಲೆಯ ಮುಖ್ಯೋಪಾದ್ಯಾಯರಿಂದ ಪಡೆದ ದೃಢೀಕರಣ, 3 ಭಾವಚಿತ್ರ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ (ಪ್ರವರ್ಗ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಪಾಲಕರ ಆದಾಯ ಮಿತಿ 44500 ರೂ ಹಾಗೂ ಪ್ರವರ್ಗ 1ರ ವಿದ್ಯಾರ್ಥಿಗಳ ಪಾಲಕರ ಆದಾಯ ಮಿತಿ 1 ಲಕ್ಷ ಮತ್ತು ಪರಿಶಿಷ್ಟ ಜಾತಿ/ ಪಂಗಡದ ವಿದ್ಯಾರ್ಥಿಗಳ ಪಾಲಕರ ಆದಾಯ ಮಿತಿ 2.5ಲಕ್ಷದೊಳಗಿರಬೇಕು). ಗ್ರಾಮ ಪಂಚಾಯ್ತಿಯಿಂದ ಪಡೆದ ವಾಸ ದೃಢೀಕರಣ, ಅಂಕಪಟ್ಟಿ ಹಾಗೂ ಆಧಾರ್ ಪ್ರತಿಯೊಂದಿಗೆ ಅರ್ಜಿಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.