ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ತನ್ನ 2012ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಬೆಂಗಳೂರಿನ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ದಿನಾಂಕ: 20-12-2021 ರಲ್ಲಿ ನೀಡಿರುವ ಸೂಚನೆಯಂತೆ ಸಂಘದ ಸರ್ವ ಸದಸ್ಯರ ವಾಸ್ತವ /ವರ್ಚುಯಲ್ ವಿಧಾನದ ಮೂಲಕ ವಿಶೇಷ ಮಹಾಸಭೆಯನ್ನು ದಿನಾಂಕ: 20-02-2022 ರ ಭಾನುವಾರ, ಬೆಳಿಗ್ಗೆ: 11:00 ಗಂಟೆಗೆ, ಶಿವಮೊಗ್ಗ ಸಾಗರ ರಸ್ತೆ ಆಟೋ ಕಾಂಪ್ಲೆಕ್ಸ್‌ನಲ್ಲಿರುವ ದ್ವಾರಕ ಕನ್ವೆನ್ಸನ್ ಹಾಲ್ ಇಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಪಡಾಕ್ಷರಿ ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದು, ಸಂಘದ ಸಮಸ್ತ ಸದಸ್ಯರು ಈ ವಿಶೇಷ ಮಹಾಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ/ಸೂಚನೆಗಳನ್ನು ನೀಡಿ, ಸಭೆಯನ್ನು ಯಶಸ್ವಿಗೊಳಿಸಿ ಕೊಡುವಂತೆ ಸಂಘದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಉದ್ದೇಶಿತ ತಿದ್ದುಪಡಿ ಉಪವಿಧಿಗಳ ಸಂಪೂರ್ಣ ವಿವರಗಳನ್ನು ನೋಟೀಸ್‌ನೊಂದಿಗೆ ಸದಸ್ಯರ ಮೊಬೈಲ್ ಸಂಖ್ಯೆಗೆ pdf-soft copyಯನ್ನು ಸಮೂಹ whatsapp ಸಂಖ್ಯೆಗಳ ಮೂಲಕ ಈಗಾಗಲೇ ಕಳುಹಿಸಲಾಗಿದೆ. ಹೆಚ್ಚುವರಿಯಾಗಿ ಕೇಂದ್ರ ಸಂಘದ ಜಾಲತಾಣ, ಸಂಘದ ಕೇಂದ್ರ ಕಚೇರಿ ಕಾರ್ಯಾಲಯ, ಎಲ್ಲಾ ಜಿಲ್ಲಾ ಹಾಗೂ ತಾಲೂಕು ಸಂಘಗಳ ಕಚೇರಿಗಳಲ್ಲಿ ಲಭ್ಯವಿದ್ದು, ಸದಸ್ಯರು ಮುಕ್ತವಾಗಿ ಪಡೆದುಕೊಳ್ಳಬಹುದಾಗಿದೆ ಎಂದವರು ತಿಳಿಸಿದ್ದಾರೆ.

ವರ್ಚುಯಲ್ ವೇದಿಕೆಯ ಮೂಲಕ ಸದಸ್ಯರಿಗೆ ಸಭೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದ್ದು, https://us02web.zoom.us/j/81805162152 ಲಿಂಕ್ ಅನ್ನು ಬಳಸಿ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ಈ ವಿಶೇಷ ಮಹಾಸಭೆಯನ್ನು ಸಂಘದ ಫೇಸ್‌ಬುಕ್ ಲಿಂಕ್:https://www.facebook.com/ksgeaofficial/
ಹಾಗೂ
https://www.facebook.com/ksgeabng/ನಲ್ಲಿಯೂ ಸಹ ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವ ಮೂಲಕ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ಸಂಘದ ರಾಜ್ಯಾಧ್ಯಕ್ಷರು ಮನವಿ ಮಾಡಿದ್ದಾರೆ.

ಸಂಘದ ಸದಸ್ಯರು ಹೆಚ್ಚಿನ ಮಾಹಿತಿಗಾಗಿ
ಸುರೇಶ್-ಮ್ಯಾನೇಜರ್-ಮೊಬೈಲ್ ಸಂಖ್ಯೆ: 9448617400, 080-22354784-83ನ್ನು ಸಂಪರ್ಕಿಸಬಹುದಾಗಿದೆ.

error: Content is protected !!