ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ರಾಜ್ಯ ಸರ್ಕಾರ ಆಯುಷ್ ಇಲಾಖೆಯು ಕೋವಿಡ್ -19 ರ ನಿಯಂತ್ರಣ ಕಾರ್ಯದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಆರೋಗ್ಯ ರಕ್ಷಿಸುವ ದೃಷ್ಠಿಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಹಾಯವಾಗುವ ಆಯುಷ್ ಚವನಪ್ರಾಷ ಔಷಧವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜು, ಅಪರ ಜಿಲ್ಲಾಧಿಕಾರಿ ಅನುರಾಧ ಇವರುಗಳ ಸಮ್ಮುಖದಲ್ಲಿ ಮೇ-18 ರಂದು ಸಾಂಕೇತಿಕವಾಗಿ ಆಶಾ ಕಾರ್ಯಕರ್ತೆಯರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಆಯುಷ್ ಅಧಿಕಾರಿ ಎ.ಎಸ್.ಪುಷ್ಪ, ಸಿಮ್ಸ್ ನಿರ್ದೇಶಕ ಡಾ|| ಗುರುಪಾದಪ್ಪ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.