ಶಿವಮೊಗ್ಗ ಜುಲೈ 19: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಡಿಯಲ್ಲಿ ಬರುವ ವಿವಿಧ ನಿಗಮಗಳ ವತಿಯಿಂದ 2022-23 ನೇ ಸಾಲಿಗೆ ನಿಗಮವಾರು ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ 20 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು ಆಗಸ್ಟ್ 20 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಆಸಕ್ತ ಅರ್ಹ ಫಲಾಪೇಕ್ಷಿಗಳು ನಿಗಮವಾರು ವೆಬ್‍ಸೈಟ್‍ಗಳಾದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ www.adcl.karnataka.gov.in,, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ www.adijambava.karnataka.gov.in, ಕರ್ನಾಟಕ ತಾಂಡ ಅಭಿವೃದ್ದಿ ನಿಗಮ www.banjarathanda.kar.nic.in, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ www.kbdc.karnataka.gov.in, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ www.ksskdc.kar.nic.in ಇಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ‘ಎ’ ಬ್ಲಾಕ್, ಶಿವಮೊಗ್ಗ, ದೂ.ಸಂ: 08182-224349 ನ್ನು ಸಂಪರ್ಕಿಸಬಹುದೆಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

error: Content is protected !!