ಶಿವಮೊಗ್ಗ, ಜುಲೈ 04:ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ವಲಯ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಬಂಡವಾಳ ಹೂಡಿಕೆ ಸಹಾಯಧನ, ತರಬೇತಿ(ಹೊಲಿಗೆ) ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ (ಹೊಲಿಗೆ) ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಗಾರೆ ಮತ್ತು ಬಡಗಿ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಣೆ, ಸಣ್ಣ ಕೈಗಾರಿಕೆಗಳು ಮತ್ತು ಕುಶಲಕರ್ಮಿಗಳು ಸೇರಿದಂತೆ ಕುಶಲಕರ್ಮಿಗಳಿಗೆ ಬಡ್ಡಿ ಸಹಾಯಧನ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿ ಹಾಗು ಜಿಲ್ಲಾ ಕೇಂದ್ರದಲ್ಲಿ ಉಪನಿರ್ದೇಶಕರ ಕಚೇರಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿ.ಪಂ. ಶಿವಪ್ಪ ನಾಯಕ ಸಂಕೀರ್ಣ, 3ನೇಮಹಡಿ, ನೆಹರೂ ರಸ್ತೆ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 20/07/2022 ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ಶಿವಮೊಗ್ಗ, ತೀರ್ಥಹಳ್ಳಿ ಮತ್ತು ಭದ್ರಾವತಿ -9380261275, ಹೊಸನಗರ, ಶಿಕಾರಿಪುರ ಮತ್ತು ಸೊರಬ-9841743640, ಸಾಗರ -9448401714 ಹಾಗೂ ಜಿಲ್ಲಾ ಕಚೇರಿ ದೂ.ಸಂ.: 08182-223376 ನ್ನು ಸಂಪರ್ಕಿಸುವುದು.

error: Content is protected !!