ಶಿವಮೊಗ್ಗ, ಸೆಪ್ಟೆಂಬರ್ 17 :
ಜಿಲ್ಲಾಡಳಿತ, ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್ 19 ಹಿನ್ನೆಲೆಯಲ್ಲಿ ಜಯಂತಿಯನ್ನು ಶ್ರೀ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಇವರು ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಜಯಂತಿಯ ಶುಭ ಕೋರಿದರು.
ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಮಹಾಸಭಾ ಅಧ್ಯಕ್ಷರಾದ ಅಗರದಳ್ಳಿ ನಿರಂಜನಮೂರ್ತಿ, ಕಾರ್ಯದರ್ಶಿ ಎಂ.ಬಿ.ಬಸವರಾಜ, ಜಿಲ್ಲಾ ವಿಶ್ವ ಬ್ರಾಹ್ಮಣ ಸಂಘದ ಅಧ್ಯಕ್ಷ ಸೋಮಾಚಾರಿ, ಕಾರ್ಯದರ್ಶಿ ವಿ.ಗಂಗಪ್ಪ, ಕಾಳಿಕಾ ಪರಮೇಶ್ವರಿ ದೇವಸ್ಥಾನ ಸೇವಾ ಸಮಿತಿಯ ಟಿ.ಆರ್.ಸತ್ಯನಾರಾಯಣ, ಅರಕೆರೆ ಕಾಳಿಕಾಂಬ ಸೇವಾ ಸಮಿತಿಯ ರಾಮ, ಮೌನೇಶ್ ಆಚಾರ್, ಶ್ರೀನಿವಾಸಮೂರ್ತಿ ಹಾಗೂ ಸಮಾಜದ ಮುಖಂಡರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಇದ್ದರು.
(ಫೋಟೊ ಇದೆ)

error: Content is protected !!