ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ Siddaramaiah ಅವರು ಇಂದು ಚಾಲನೆ ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.