ಶಿವಮೊಗ್ಗ ಜುಲೈ 21: ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಹಾಗೂ ಆದಿಚುಂಚನಗಿರಿ ಕನ್ನಡ ಪ್ರೌಢಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಆದಿಚುಂಚನಗಿರಿ ಕನ್ನಡ ಪ್ರೌಢಶಾಲೆಯಲ್ಲಿ ಶಾಲಾ ಗ್ರಾಹಕ ಕ್ಲಬ್ ಯೋಜನೆ 2021-22 ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಶಿವಣ್ಣ.ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಟಿ.ಮಂಜುನಾಥನ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ.ಕೆ.ಸಿ.ಮಧು, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‍ನ ನಿರ್ದೇಶಕ ಕೊಳಿಗೆ ವಾಸಪ್ಪಗೌಡರು, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಎಸ್.ಮಂಜುನಾಥ್, ಜಿಲ್ಲಾ ಗ್ರಾಹಕ ರಕ್ಷಣಾ ಪರಿಷತ್ ಸದಸ್ಯರಾದ ಎಂ.ಎಂ ಜಯಸ್ವಾಮಿ, ಶೀಲಾ ಸುರೇಶ್, ಶ್ರೀ ಆದಿಚುಂಚನಗಿರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಬಿ.ರಮೇಶ್ ಉಪಸ್ಥಿತರಿದ್ದರು.
(ಫೋಟೊ ಇದೆ)