ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಮನವಿ ಮೇರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಶಂಕರ ಭಟ್ಟ ಅವರ ಚಿಕಿತ್ಸೆಗಾಗಿ 2 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಜೂರು ಮಾಡಿದ್ದಾರೆ.
ಸುದ್ದಿಮನೆಯಲ್ಲಿ ಕೆಲಸ ಮಾಡುತ್ತಿರುವ ಸಂಧ್ಯಾ ಅವರ ತಂದೆಯಾಗಿರುವ ಶಂಕರ ಭಟ್ಟ ಅವರು ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಸುಮಾರು 6 ಲಕ್ಷ ರೂ ವೆಚ್ಚ ಮಾಡಿಕೊಂಡಿದ್ದು, ತೀವ್ರ ಕಷ್ಟದಲ್ಲಿರುವ ಬಗ್ಗೆ ಕೆಯುಡಬ್ಲ್ಯೂಜೆಗೆ ಮನವಿ ಮಾಡಿಕೊಂಡಿದ್ದರು.
ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತು ಪರಿಹಾರ ಕೊಡಿಸಲು ಸಹಕರಿಸಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಕೆ ವಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಟಿ ಅರುಣ್ ಅವರುಗಳು
ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.