ಶಿವಮೊಗ್ಗ, ಮಾರ್ಚ್- 18 : ಶಿವಮೊಗ್ಗ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳ ಗಣತಿ ಕಾರ್ಯವನ್ನು ಏಪ್ರಿಲ್-1 ರಿಂದ 3 ರವರೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಏಕಕಾಲದಲ್ಲಿ ನಡೆಸಲಾಗುತ್ತಿದ್ದು, ಮಹಾನಗರ ಪಾಲಿಕೆ/ನಗರಸಭೆ/ಪುರಸಭೆ/ಪಟ್ಟಣ ಪಂಚಾಯತಿ/ಗ್ರಾಮ ಪಂಚಾಯತಿಗಳ ಸಮೀಕ್ಷಾ ತಂಡದ ಅಧಿಕಾರಿಗಳು ನಗರ/ ಗ್ರಾಮಗಳಲ್ಲಿ ಸಂಚರಿಸಿ ಸಮೀಕ್ಷೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಿ ಕಾರ್ಯನಿರ್ವಹಿಸಲು ಅನುವು ಮಾಹಿಕೊಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿರುತ್ತಾರೆ. ಮ್ಯಾನ್ಯುವಲ್ ಸ್ಕ್ಯಾವೆಂಜರ್ಗಳು ತಾವಾಗಿಯೇ ಖುದ್ದು ಕಚೇರಿಯಲ್ಲಿ ನಿಗಧಿತ ನಮೂನೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದಿ:01/04/21 ರಿಂದ 03/04/21 ರವರೆಗೆ ಸಮೀಕ್ಷೆ ಕ್ಯಾಂಪ್ಗಳನ್ನು ಆಯೋಜಿಸುವುದು, ದಿ:04/04/21 ರಿಂದ 03/05/21ರ ವರೆಗೆ ಮಹಾನಗರ ಪಾಲಿಕೆಯಲ್ಲಿ ಹಾಗೂ ದಿ: 04/04/21 ರಿಂದ 18/04/21ರವರೆಗೆ ನಗರಸಭೆ/ಪುರಸಭೆ/ಪಟ್ಟಣ ಪಂಚಾಯತಿ/ಗ್ರಾಮ ಪಂಚಾಯತಿಗಳಲ್ಲಿ ಅರ್ಜಿಗಳ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆ/ನಗರಸಭೆ/ಪುರಸಭೆ/ಪಟ್ಟಣ ಪಂಚಾಯತಿ/ಗ್ರಾಮ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲೆ ಮತ್ತು ತಾಲೂಕು ಕಚೇರಿಗಳನ್ನು ಸಂಪರ್ಕಿಸುವುದು.