ಶಿವಮೊಗ್ಗ, ಮೇ 17 : ಶಿವಮೊಗ್ಗ ಮತ್ತು ಭದ್ರಾವತಿಯಲ್ಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಶಿವಮೊಗ್ಗ ತಾಲೂಕು ಸೋಮಿನಕೊಪ್ಪದಲ್ಲಿನ ಮೆಟ್ರಿಕ್ ನಂತರದ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯ ಮತ್ತು ಲಷ್ಕರ್ ಮೊಹಲ್ಲಾದಲ್ಲಿರುವ ಮೆಟ್ರಿಕ್ ನಂತರದ ಹಾಗೂ ವೃತ್ತಿಪರ ಬಾಲಕೀಯರ ವಿದ್ಯಾರ್ಥಿನಿಲಯ, ಶಿವಮೊಗ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ಭದ್ರಾವತಿ ತಾಲೂಕಿನ ಬೊಮ್ಮನಕಟ್ಟೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಿದೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು ಆಯಾ ವಿದ್ಯಾರ್ಥಿನಿಲಯಗಳಿಂದ ಅಥವಾ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ ಅಧಿಕೃತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಯೊಂದಿಗೆ ಜೂನ್-6 ರೊಳಗೆ ಆಯಾ ವಿದ್ಯಾರ್ಥಿ ನಿಲಯದ ನಿಲಯಪಾಲಕರರಲ್ಲಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಯನ್ನು ದೂ.ಸಂ: 08182-276258 ಕ್ಕೆ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.