ಶಿವಮೊಗ್ಗ. ಮೇ 29 :  : ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗಾಗಿ 2019ರ ಮೇ 20ರಿಂದ 31ರವರೆಗೆ ವಿಶೇಷ ದಾಖಲಾತಿ ಆಂದೋಲನ ಹಾಗೂ ಜೂನ್ 01ರಿಂದ 30ರವರೆಗೆ ಸಾಮಾನ್ಯ ದಾಖಲಾತಿ ಆಂದೋಲನವನ್ನು ನಡೆಸಲು ಉದ್ದೇಶಿಸಿದೆ.
ಶಾಲಾ ಹಂತದಲ್ಲಿ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಅಂಗನವಾಡಿ ಸಹಾಯಕಿಯರು, ಆರೋಗ್ಯ ಕಾರ್ಯಕರ್ತೆಯರನ್ನೊಳಗೊಂಡ ತಂಡವು ತಾಲೂಕಿನ ಎಲ್ಲಾ ಜನವಸತಿ ಪ್ರದೇಶಗಳ ಸಮೀಕ್ಷೆ ನಡೆಸಲಿದ್ದು, 6 ಹಾಗೂ 16+ ವಯೋಮಿತಿಯ ಶಾಲೆಗೆ ಹಾಜರಾಗುತ್ತಿರುವ, ಶಾಲೆಯಿಂದ ಹೊರಗುಳಿದಿರುವ, ಶಾಲೆಗೆ ದಾಖಲಾಗಬೇಕಾಗಿರುವ ಮಕ್ಕಳ ಸಮೀಕ್ಷೆ ನಡೆಸಲಾಗುತ್ತದೆ. ವಿಶೇಷವಾಗಿ ಹೊರ ರಾಜ್ಯಗಳಿಂದ ವಲಸೆ ಬಂದ ಮಕ್ಕಳನ್ನು ಈ ಸಮೀಕ್ಷೆಗೆ ಒಳಪಡಿಸಲಾಗುತ್ತದೆ. ಈ ವಯೋಮಾನದ ಶಾಲೆಯಿಂದ ಹೊರಗುಳಿದ ಮಕ್ಕಳು ಕಂಡುಬಂದಲ್ಲಿ ಸಮೀಪದ ಶಾಲೆಗೆ ಮಾಹಿತಿ ನೀಡುವಂತೆ ಶಿವಮೊಗ್ಗ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
error: Content is protected !!