ಶಿವಮೊಗ್ಗ ಮೇ 13 ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಲೆಮಾರಿ, ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತರಿಗೆ ಹಸು/ ಎಮ್ಮೆ ಕರು ಸಾಕಾಣಿಕೆ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಮೇ 20 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅಜ್ಜಪ್ಪ ಹೆಚ್.ಇ. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.