ಶಿವಮೊಗ್ಗ, ಮಾರ್ಚ್ 20 : ಕರೋನಾ ವೈರಸ್ ಕಾಯಿಲೆ ಹರಡುವುದನ್ನು ತಡೆಗಟ್ಟಲು ಹಾಗೂ ಪ್ರವಾಸಿಗರ ಆರೋಗ್ಯದ ಹಿತದೃಷ್ಠಿಯಿಂದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧವನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಹುಲಿ ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.