ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ವತಿಯಿಂದ ಹೊಸಗುಂದ ಉತ್ಸವ ಮತ್ತು ಲಕ್ಷದೀಪೋತ್ಸವ ನಡೆಸುತ್ತಿದ್ದು, ಈ ವರ್ಷ ಡಿ. 1ರಿಂದ 3ರವರೆಗೂ ಹೊಸಗುಂದ ಉತ್ಸವ ಮತ್ತು ಲಕ್ಷದೀಪೋತ್ಸವ ಆಯೋಜಿಸಲಾಗಿದೆ.
ಶೃಂಗೇರಿಯ ಉಭಯ ಜಗದ್ಗುರುಗಳ ದಿವ್ಯ ಆಶೀರ್ವಾದದೊಂದಿಗೆ ಹೊಸಗುಂದ ಉತ್ಸವವು ನಡೆಯಲಿದ್ದು, ಡಿಸೆಂಬರ್ 1ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಶಿವಮೊಗ್ಗ ಇವರ ಸಹಕಾರದಲ್ಲಿ ಗಿರಿಜನ ಉತ್ಸವ ಆಯೋಜಿಸಲಾಗಿದೆ. ನಾಡಿನ ಹೆಸರಾಂತ ಕಲಾವಿದರು ವೈವಿಧ್ಯಮಯ ಕಾರ್ಯಕ್ರಮ ನೀಡಲಿದ್ದಾರೆ.
ಡಿಸೆಂಬರ್ 2ರಂದು ಹೊಸಗುಂದ ಉತ್ಸವದ ಪ್ರಯುಕ್ತ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಗೆ ಸಂಜೆ 4ಕ್ಕೆ ಜಾನಪದ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ. ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ನಗದು ಬಹುಮಾನ ನೀಡಲಾಗುತ್ತದೆ. ಸಂಜೆ 7ಕ್ಕೆ ಯೋಗ ನೃತ್ಯ , ಪ್ರಸಿದ್ಧ ಗಾಯಕ ಹುಮಾಯೂನ್ ಹರ್ಲಾಪುರ ಅವರಿಂದ ಸಂಗೀತ, ನಂತರ ಕಲಾಸಿಂಚನ ಬಳಗದಿಂದ ಕೆರೆಗೆ ಹಾರ ನಾಟಕ ಪ್ರದರ್ಶನ ಇರಲಿದೆ.
ಡಿಸೆಂಬರ್ 3ರಂದು ಸಂಜೆ 5.30ಕ್ಕೆ ವನಶ್ರೀ ಸಂಸ್ಥೆಯಿಂದ ಜಲಯೋಗ, 6ಕ್ಕೆ ತೇಜಸ್ವಿ ತಬಲಾ ತಂಡ, ಸಾಗರ ಇವರಿಂದ ವಾದ್ಯ ವೈವಿಧ್ಯ, ನಂತರ ವಿದ್ವಾನ್ ಪ್ರದ್ಯುಮ್ನ ಮತ್ತು ತಂಡದವರಿಂದ ಶ್ರೀ ದುರ್ಗಾದೇವಿ ಭರತನಾಟ್ಯ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕøತ ಸಾಧಕರನ್ನು ಸನ್ಮಾನಿಸಲಾಗುವುದು. ರಾತ್ರಿ 8ಕ್ಕೆ ಲಕ್ಷದೀಪೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಪದ್ಮಶ್ರೀ ಪುರಸ್ಕøತ ಡಾ. ವಿ.ಆರ್. ಗೌರಿಶಂಕರ್, ಆಡಳಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಶೃಂಗೇರಿ ಪೀಠ ಹಾಗೂ ಅಧ್ಯಕ್ಷರು, ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್, ಹೊಸಗುಂದ ಅವರು ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಮೂರು ದಿನಗಳ ಕಾಲ ನಡೆಯುವ ಹೊಸಗುಂದ ಉತ್ಸವದ ಯಶಸ್ಸಿಗೆ ಸಹಕರಿಸುವಂತೆ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‍ನ ಸಂಸ್ಥಾಪಕ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಸಿ.ಎಂ.ಎನ್.ಶಾಸ್ತ್ರಿ ಕೋರಿದ್ದಾರೆ.

error: Content is protected !!