ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಪುಣ್ಯಕೋಟಿ ದತ್ತು ಯೋಜನೆಯ ವ್ಯವಸ್ಥಿತ ಹಾಗೂ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಸಹಕರಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಮನವಿ ಮಾಡಿಕೊಂಡಿದ್ದರು.
ಈ ಯೋಜನೆಯ ಅನುಷ್ಟಾನಕ್ಕೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಚರ್ಚಿಸಿ, ನೌಕರರಿಂದ ವಂತಿಗೆ ಕೊಡಿಸಲು ನಿರ್ಣಯ ಕೈಗೊಳ್ಳಲಾಗಿತ್ತು.
ರಾಜ್ಯ ನೌಕರರ ಸಂಘವು ನೀಡಿದ ಕರೆಗೆ ರಾಜ್ಯದ ಎಲ್ಲಾ ಇಲಾಖೆಗಳ ವಿವಿಧ ಶ್ರೇಣಿಯ ನೌಕರರು ತಮಗೆ ನಿಗಧಿಪಡಿಸಿದ ವಂತಿಗೆಯನ್ನು ನೀಡಿ ಸಹಕರಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿಯೂ 1ಕೋಟಿಗೂ ಹೆಚ್ಚಿನ ವಂತಿಗೆಯನ್ನು ನೀಡಿ ಸಹಕರಿಸಿದ ಜಿಲ್ಲೆಯ ಸಮಸ್ತ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.