ಶಿವಮೊಗ್ಗ: ಡಿಸೆಂಬರ್ 23 : 2022-23 ನೇ ಸಾಲಿನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ರಾಜಶ್ರೀ ಶಾಹುಮಹಾರಾಜ ವಿದೇಶ ವ್ಯಾಸಂಗ ಯೋಜನೆಗಳ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಮರಾಠ ಸಮುದಾಯಗಳ ಅರ್ಹ ಫಲಾಪೇಕ್ಷಿಗಳಿಂದ ಸುವಿಧ http://suvidha.karnataka.gov.in ಪೋರ್ಟಲ್ನ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ.31 ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.