ಶಿವಮೊಗ್ಗ, ಜನವರಿ 19 : ಕೃಷಿ ಇಲಾಖೆಯು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಆತ್ಮ ನಿರ್ಭರ್ ಭಾರತ್ ಅಭಿಯಾನದಡಿ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವೈಯುಕ್ತಿಕ ಕಿರು ಉದ್ದಿಮೆಗಳಿಗೆ, ರೈತರ ಉತ್ಪಾದಕರ ಸಂಸ್ಥೆಗಳು, ಉತ್ಪಾದಕರ ಸೊಸೈಟಿಗಳು, ಸ್ವಸಹಾಯ ಸಂಘಗಳಿಗೆ ಹಾಗೂ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಹಾಯಧನ ಯೋಜನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳು ಪರಿಶೀಲಿಸಿ ಗುರುತಿಸುವ ಅರ್ಹ ಫಲಾನುಭವಿಗಳಿಗೆ ಯೋಜನಾ ವರದಿ ಸಿದ್ಧಪಡಿಸಲು ಸಹಾಯ, ಸಾಲಕ್ಕಾಗಿ ಬ್ಯಾಂಕ್ಗಳೊಂದಿಗೆ ಸಂಪರ್ಕ, ಉಚಿತವಾಗಿ ತರಬೇತಿ ಮತ್ತು ಇತರ ಸೇವೆಗಳನ್ನು ಒದಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು (ಕೈಗಾರಿಕೆ), ಜಂಟಿ ಕೃಷಿ ನಿರ್ದೇಶಕರು ಅಥವಾ ತೋಟಗಾರಿಕಾ ಉಪ ನಿರ್ದೇಶಕರನ್ನು ಅಥವಾ ದೂ.ಸಂ.: 08182-222208 ನ್ನು ಸಂಪರ್ಕಿಸುವುದು.