ಶಿವಮೊಗ್ಗ, ಆಗಸ್ಟ್ 16 : ಆಗಸ್ಟ್ 19 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.