ಜೂನ್ 25 ರಿಂದ ಜುಲೈ -03 ರವರೆಗೆ ಜಿಲ್ಲೆಯ 84 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಅಂದು ಬೆಳಿಗ್ಗೆ 8.00 ರಿಂದ ಸಂಜೆ 4.00ರವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಅಂಗಡಿಗಳು ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳೊಳಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಈ ನಿರ್ಬಂಧಿತ ಪ್ರದೇಶದ ಸುತ್ತಮುತ್ತಲಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಮೊಬೈಲ್ ಬಳಕೆಯನ್ನು ನಿಷೇದಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ನೀಡಿದ್ದಾರೆ.
ಯಾರಾದರೂ 200 ಮೀ ವ್ಯಾಪ್ತಿಯೊಳಗೆ ಪ್ರವೇಶಿಸಿದರೆ/ಪ್ರವೇಶಿಸಲು ಯತ್ನಿಸಿದರೆ ಅಂತಹವರನ್ನು ನಿರ್ದಾಕ್ಷಿಣ್ಯವಾಗಿ ಪೊಲೀಸ್ರ ವಶಕ್ಕೆ ಒಪ್ಪಿಸಿ ಕೂಡಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.