ಶಿವಮೊಗ್ಗ : ಜೂನ್ 18 : ಕನ್ನಡ ಪುಸ್ತಕ ಪ್ರಾದಿಕಾರವು ಜನವರಿ 2018ರಿಂದ ಡಿಸೆಂಬರ್ ಅವಧಿಯವರೆಗಿನ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮುಟ್ಟವನ್ನು ಪರಿಗಣಿಸಿ, ಕಲಾವಿದರು, ಲೇಖಕರು, ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು-2018(ಪ್ರಥಮ, ದ್ವಿತೀಯ, ತೃತೀಯ, ಮಕ್ಕಳು ಪುಸ್ತಕ, ಮುಖಪುಟ ಚಿತ್ರ ವಿನ್ಯಾಸದ ಪ್ರಥಮ, ಮುಖಪುಟ ಚಿತ್ರಕಲೆಯ ದ್ವಿತೀಯ) ಬಹುಮಾನಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು, ಕಲಾವಿದರು, ಲೇಖಕರುಗೂ ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ ಮತ್ತಿತರ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಜುಲೈ 15ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಅರ್ಜಿಯೊಂದಿಗೆ ಸಲ್ಲಿಸಲಾಗುವ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೆ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ 080-22484516, 22107704ನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.